ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ

Share

Advertisement
Advertisement

ಬೆಂಗಳೂರು:ಕೇಂದ್ರ ಮಾಜಿ ವಿದೇಶಾಂಗ ಸಚಿವ,ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮಂಗಳವಾರ ನಿಧನರಾಗಿದ್ದಾರೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರೆವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು.ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page