ಹೊಸಾಡು ಶಾಲೆಗೆ ಅಕ್ಷರ ರಥ ಕೊಡುಗೆ
ಕುಂದಾಪುರ:ತಾಲೂಕಿನ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ವತಿಯಿಂದ ಅಕ್ಷರ ರಥವನ್ನು ಶಾಲಾ ಎಸ್‍ಡಿಎಂಸಿ ಸಮಿತಿಗೆ ಭಾನುವಾರ ಹಸ್ತಾಂತರ ಮಾಡಲಾಯಿತು.
ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ.ಉಮೇಶ್ ಪುತ್ರನ್,ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್,ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ಶೆಟ್ಟಿ ಮತ್ತು ತೇಜಪ್ಪ ಶೆಟ್ಟಿ,ರಾಜೀವ ಶೆಟ್ಟಿ,ಡಾ.ಕಿಶೋರ್ ಕುಮಾರ್ ಶೆಟ್ಟಿ,ಎಸ್‍ಡಿಎಂಸಿ ಸದಸ್ಯರು,ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕ ರಾಜೇಶ್ ಸ್ವಾಗತಿಸಿ,ವಂದಿಸಿದರು.ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಶಾಲಾ ವಾಹನ ಧಾವಿಸಿ ಬರುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲಿದೆ.