ತಲ್ಲೂರು ಪ್ರವಾಸಿ ಬಳಿ ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕುಂದಾಪುರ:ಬೈಂದೂರು ನಿಂದ ಕುಂದಾಪುರ ದತ್ತ ಸಾಗುತ್ತಿದ್ದ ಎಕೆಎಂಎಸ್ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಬೈಂದೂರು ನಿಂದ ಕುಂದಾಪುರಗೆ ಸಾಗುತ್ತಿದ್ದ ಬಸ್ ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಸಹಿತ ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ.ಘಟನೆ ವಿವಿಧ ಕಾಲೇಜುಗಳಿಗೆ ತೆರಳುತ್ತಿದ್ದ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಚ್ಚಿನ ಇನ್ನಷ್ಟೆ ತಿಳಿಯಬೇಕಿದೆ.