ಚೆಕ್ ಪೋಸ್ಟ್ ಗೆ ಡಿಸಿ ಭೇಟಿ,ಬಿಗಿ ಬಂದೋಬಸ್ತ್
ಕುಂದಾಪುರ:ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರು ಮಂಗಳವಾರ ಕುಂದಾಪುರ ತಾಲೂಕಿನ ಹಾಲಾಡಿ,ಹೊಸಂಗಡಿ,
ಸಾಯಿಬ್ರಕಟ್ಟೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್ ರಶ್ಮಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ.ಕೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು ವಾಹನಗಳನ್ನು ತಿವೃವಾಗಿ ತಪಾಸಣೆ ಮಾಡಲಾಗುತ್ತಿದೆ.ದಿನದ 24 ಗಂಟೆಯೂ ಪಾಳಿ ಆಧಾರದಲ್ಲಿ ಸಿಬ್ಬಂದಿಗಳು ಕೆಲಸವನ್ನು ನಿರ್ವಹಿಸುತ್ತಿದ್ದಾರೆ.ಬಿರು ಬಿಸಿಲಿನ ತಾಪ ಚುನಾವಣಾ ಸಿಬ್ಬಂದಿಗಳನ್ನು ಕಾಡುತ್ತಿದೆ.