ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೀನುಗಾರ ವೆಂಕಟರಮಣ ಖಾರ್ವಿಗೆ ಆಹ್ವಾನ
ಕುಂದಾಪುರ:ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರಕಾರ ಮೀನುಗಾರ ಸಮುದಾಯದ ಮುಖಂಡರಾದ ಬೈಂದೂರು ತಾಲೂಕಿನಿಂದ ರಾಣಿಬಲೆ ಮೀನುಗಾರರ ಒಕ್ಕೂಟ ಉಪ್ಪುಂದ ಅದರ ಅಧ್ಯಕ್ಷ ವೆಂಕಟರಮಣ ಖಾರ್ವಿ ಹಾಗೂ ಪತ್ನಿ ಪ್ರಮೀಳಾ ಅವರಿಗೆ ಆಹ್ವಾನ ನೀಡಿದೆ.ಮೀನುಗಾರರಾದ ವೆಂಕಟರಮಣ ಮತ್ತು ಅವರ ಪತ್ನಿ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.ಮಂಗಳೂರು ಮತ್ತು ಉಡುಪಿಯಿಂದಲೂ ಕೂಡ ಮೀನುಗಾರ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರರ ಪ್ರತಿನಿಧಿಯಾಗಿ ಭಾಗವಹಿಸಲು ಅವಕಾಶ ಮಾಡಿಕೊಟ್ಟ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ರಾಜ್ಯದ ಮೀನುಗಾರಿಕೆ ಸಚಿವ ಮಂಕಾಳ ಎಸ್.ವೈದ್ಯ ಮತ್ತು ಈ ಬಗ್ಗೆ ಮುತುವರ್ಜಿ ವಹಿಸಿದ ಬೈಂದೂರಿನ ಮಾಜಿ ಶಾಸಕ.ಕೆ. ಗೋಪಾಲ ಪೂಜಾರಿ ಅವರಿಗೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.























































































































































































































































































































































































































































































































































































































































































































































































































































































































































































































































































































































































































































































































































































































































































