ಆಲೂರಿಗೆ ಸರಕಾರಿ ಬಸ್ ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ
ಕುಂದಾಪುರ:ಆಲೂರು-ಕುಂದಾಪು ಮತ್ತು ಕೊಲ್ಲೂರು ಮಾರ್ಗದಲ್ಲಿ ಸರಕಾರಿ ಬಸ್ ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಲೂರು ಗ್ರಾಮ ಪಂಚಾಯತ್ ಎದುರುಗಡೆ ಸ್ಥಳೀಯ ವಿದ್ಯಾರ್ಥಿಗಳು ಶನಿವಾರ ಬೃಹತ್ ಪ್ರತಿಭಟನೆ ನಡೆಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು,ಪೋಷಕರು,ಗ್ರಾಮಸ್ಥರು ಉಪಸ್ಥಿತರಿದ್ದರು.ಮಕ್ಕಳು ಮತ್ತು ಮಹಿಳೆಯರ ಹಿತದೃಷ್ಟಿಯಿಂದ ಕಾಡಂಚಿನ ಪ್ರದೇಶವಾದ ಆಲೂರಿಗೆ ಸರಕಾರಿ ಬಸ್ ಓಡಿಸಲು ಕೂಡಲೆ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.