ಶ್ರೀಗುಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ
ಕುಂದಾಪುರ:ತಾಲೂಕಿನ ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ,ಮಹಾಗಣಪತಿ,ಭದ್ರಕಾಳಿ,ನಾಗದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.
ಶ್ರೀ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಅಂಗವಾಗಿ ಮಹಾಮಂಗಳಾರತಿ,ಹೂವಿನ ಅಲಂಕಾರ ಪೂಜೆ,ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀ ಕ್ಷೇತ್ರದ ಮಹಿಮೆಯನ್ನು ಸಾರುವ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಯಿತು.