ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲದಿಂದ ತಾಲೂಕು ಕಚೇರಿಗೆ ಮುತ್ತಿಗೆ ಯತ್ನ

Share

ಕುಂದಾಪುರ:ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ಖಂಡಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೈಂದೂರು ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪೋಷಣೆಯಿಂದ ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ನಡೆಸಲಾಗುತ್ತಿದೆ. ವಕ್ಫ್ ನೋಟೀಸ್ ಮೂಲಕ ರೈತರಿಗೆ,ಸಾರ್ವಜನಿಕರಿಗೆ ಸಮಸ್ಯೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು.ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡು ರೈತರಿಗೆ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಬಹುಸಂಖ್ಯಾತರ ನೋವಿನ ಪರಿಣಾಮವನ್ನು ರಾಜ್ಯ ಸರಕಾರ ಎದುರಿಸಬೇಕಾಗುತ್ತದೆ ಎಂದರು.
ಕೇಂದ್ರ ಸರಕಾರ ಈಗಾಗಲೇ ವಕ್ಫ್ ತಿದ್ದುಪಡಿ ವಿಧೇಯಕ ಜಾರಿಗೆ ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದು ಮುಂದಿನ ಅಧಿವೇಶನದಲ್ಲಿ ಮಂಡನೆ ಯಾಗುವ ಸಾಧ್ಯತೆಯು ಇದೆ.ತಿದ್ದುಪಡಿ ಮಸೂದೆ ಜಾರಿಯಾದರೆ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.
ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ರೈತರ ಜಮೀನು ಕಬಾಲಿಕೆ ಸೇರಿದಂತೆ ಪ್ರಮುಖ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಅಧ್ಯಕ್ಷ ಬಿ. ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೈಂದೂರಿನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಬಟವಾಡಿ, ರೋಹಿತ್ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಿಯದರ್ಶಿನಿ ಬೆಸ್ಕೂರು,ಮಹೇಂದ್ರ ಪೂಜಾರಿ,ಉಮೇಶ್ ಕಾಲ್ಗದ್ದೆ, ಶ್ಯಾಮಲ ಕುಂದರ್,ಶರತ್ ಶೆಟ್ಟಿ ಉಪ್ಪುಂದ, ಭಗೀರಥ ಸುರೇಶ್, ಅನಿತಾ ಕೆ. ಆರ್., ಡಾ. ಅತುಲ್ ಕುಮಾರ್ ಶೆಟ್ಟಿ, ಗಜೇಂದ್ರ ಸಹಿತವಾಗಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರು ಅಪಾರ ಸಂಖ್ಯೆಯನ್ನು ಸೇರಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Advertisement

Share

Leave a comment

Your email address will not be published. Required fields are marked *

You cannot copy content of this page