ಮಾರಣಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ : ಸಂಭ್ರಮದ ಮಕರ ಸಂಕ್ರಮಣ ಉತ್ಸವ ಸಂಪನ್ನ

Share

ಕುಂದಾಪುರ:ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.ದೇವರಸನ್ನಿಧಿಯಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ರಾಜ್ಯ ಜಿಲ್ಲೆ ತಾಲೂಕುಗಳಿಂದ ಆಗಮಿಸಿದ ಭಕ್ತರು ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದರು.ಕುಂದಾಪುರ, ಬೈಂದೂರು ಹಾಗೂ ಉಡುಪಿ ತಾಲೂಕುಗಳಿಂದ ಆಗಮಿಸಿದ 35 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ದೇವರ ಅನಾಯಾಸ ದರ್ಶನಕ್ಕೆ ಸಕಲ ಸೌಕರ್ಯ ಒದಗಿಸಲಾಗಿತ್ತು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾರಣಕಟ್ಟೆ ಶ್ರೀ ಕೃಷ್ಣ ಮೂರ್ತಿ ಮಂಜರು ಮಾತನಾಡಿ,ಅನಾದಿ ಕಾಲದಿಂದಲೂ ಮಕರ ಸಂಕ್ರಾಂತಿ ದಿನ ಅಭಿಜಿತ್ ಲಗ್ನ ಸಮೂಹರ್ತನಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಕ್ತಾದಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.
ಅವಿಭಜಿತ ದ.ಕ
ಜಿಲ್ಲೆಯ ಜನರು ಮಾತ್ರವಲ್ಲದೆ ಶ್ರಂಗೇರಿ ,ಕೊಪ್ಪಳ ಇನ್ನಿತರ ಭಾಗದಿಂದಲೂ ಜಾತ್ರೆಗೆ ಬರುತ್ತಾರೆ ಎಂದು ಹೇಳಿದರು.ಶ್ರೀ ಬ್ರಹ್ಮಲಿಂಗೇಶ್ವರ ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ನುಡಿದರು.
ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ
ಉದ್ಯಮಿ ಜಯರಾಮ ಶೆಟ್ಟಿ ಮಾತನಾಡಿ
,ಶ್ರೀ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಾಲಯದ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.ವರ್ಷಂಪ್ರತಿ ನಡೆಯುವ ಮಾರಣಕಟ್ಟೆ ಜಾತ್ರೆಗೆ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಸಲ್ಲಿಸುತ್ತಾರೆ.ಶ್ರೀ ದೇವರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭ ಹಾರೈಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page