ಮೀನುಗಾರರಿಗೆ ಪರಿಹಾರ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮುಖ್ಯಮಂತ್ರಿಗಳಿಗೆ ಮನವಿ

Share

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ಬೆಂಗಳೂರಿನಲ್ಲಿ ಬುಧವಾರ ಭೇಟಿಮಾಡಿ ಕುಂದಾಪುರ ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ಮೀನುಗಾರರಿಗೆ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿ ಬಳಿಕ ಮಾತನಾಡಿ,ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಂಭವಿಸಿದ ತೂಫಾನ್,ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ಸರಿಯಾಗಿ ನಡೆಯದೆ ಮೀನುಗಾರರು ಆರ್ಥಿಕ ನಷ್ಟವನ್ನು ಅನುಭವಿಸಿದ್ದಾರೆ.ಅದರ ನಡುವೆ ಗಂಗೊಳ್ಳಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಮೀನುಗಾರರು ಇನ್ನಷ್ಟು ಆಘಾತಕ್ಕೆ ಒಳಗಾಗಿದ್ದಾರೆ.ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ಬೋಟ್ ಮತ್ತು ದೋಣಿಗಳ ಮಾಲೀಕರಿಗೆ ಅಂದಾಜು 10 ಕೋಟಿಗೂ ಅಧಿಕ ನಷ್ಟವಾಗಿದ್ದು,ಮೀನುಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ.ಮೀನುಗಾರರ ಜತೆ ಸದಾ ನಾವೀದ್ದೇವೆ ಎಂದು ಹೇಳಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ,ದೇಶದ ಆರ್ಥಿಕ ಪ್ರಗತಿಗೆ ಮೀನುಗಾರರ ಕೊಡುಗೆ ಅಪಾರವಾದುದು.ಮೀನುಗಾರರಿಲ್ಲದೆ ನಾವಿಲ್ಲ.ಅವರ ನೋವಿನ ಜತೆ ಸದಾ ನಾವು ಭಾಗಿದಾರರಾಗುತ್ತೇವೆ.ಪರಿಹಾರವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.
ಗಂಗೊಳ್ಳಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮೀನುಗಾರಿಕಾ ಬೋಟ್,1 ಸಣ್ಣ ದೋಣಿ,4 ಡಿಂಗಿ ದೋಣಿಗಳು ಸಹಿತ 2ಬೈಕ್ ಸುಟ್ಟು ಭಸ್ಮವಾಗಿ ಹೋಗಿದೆ.ಅಂದಾಜು 10 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ.

Advertisement

Share

Leave a comment

Your email address will not be published. Required fields are marked *

You cannot copy content of this page