ಕ್ನನಡ ಭಾಷಣ ಸ್ಪರ್ಧೆ:ಜನತಾ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ
ಕುಂದಾಪುರ:76 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಎಂಆರ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮಂಗಳೂರು ವತಿಯಿಂದ ಉಡುಪಿ ಮತ್ತು ದ.ಕ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನನ್ನ ಕಲ್ಪನೆಯ ಭಾರತ’ ಎನ್ನುವ ವಿಷಯದ ಕುರಿತಾದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಶ್ರುತಿಕಾ ಉಭಯ ಜಿಲ್ಲಗೆ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ವರ್ಷಾ ರವಿಶಂಕರ್ ಚತುರ್ಥ ಸ್ಥಾನವನ್ನು ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಬೋಧಕ,ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.ಭಾಷಣ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳಿಂದ ಒಟ್ಟು 110 ಸ್ಪರ್ಥಿಗಳು ಭಾಗವಹಿದ್ದರು.