ಮಹಾರಾಜ ಸ್ವಾಮಿ ಶ್ರೀವರಾಹ ದೇವರ ಜಾತ್ರಾ ಮಹೋತ್ಸವ ಸಂಪನ್ನ
ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯಲಿರುವ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.
ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು,ಶ್ರೀ ನರಸಿಂಹ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣು ಕಾಯಿ ಸೇವೆಯನ್ನು ನೆರವೇರಿಸಲಾಯಿತು.ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದು ಸೇವೆಯನ್ನು ಅರ್ಪಿಸಿದರು.ಪಂಚಕಜ್ಜಾಯ,ಪ್ರಸಾದ ವಿತರಣೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ ನಾಯಕ ಮತ್ತು ಸದಸ್ಯರು,ದೇವಸ್ಥಾನದ ಅರ್ಚಕರು,ಉಪಾದಿವಂತರು,ಸಿಬ್ಬಂದಿಗಳು,ಗ್ರಾಮಸ್ಥರು,ಊರ ಪರವೂರ ಭಕ್ತರು ಉಪಸ್ಥಿತರಿದ್ದರು.ಗಂಗೊಳ್ಳಿ ಪೂಲೀಸ್ ಠಾಣೆ ವತಿಯಿಂದ ಪೂಲೀಸ್ ಬಂದೊಬಸ್ತ್ ಕೈಗೊಳ್ಳಲಾಯಿತು.