ಎಂಎಲ್‌ಎ ಟಿಕೆಟ್ ಕೊಡಿಸುದಾಗಿ ವಂಚನೆ:ಚೈತ್ರಾ ಕುಂದಾಪುರ ಅರೆಸ್ಟ್
ಬೈಂದೂರು:2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ಸಮಾಜ ಸೇವಕ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿಯೊಬ್ಬರಿಗೆ ಬರೊಬ್ಬರಿ 7. ಕೋಟಿ.ರೂ ವಂಚನೆ ಮಾಡಿರುವ ಪ್ರಕರಣದಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಯ ಲಾಭಾಂಶವನ್ನು ಬಳಸಿಕೊಳ್ಳಲು ಮುಂದಾಗಿದ್ದ ಚೈತ್ರ ಕುಂದಾಪುರ ಮತ್ತು ತಂಡ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಸುಳ್ಳು ಭರವಸೆಗಳನ್ನು ನೀಡಿ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ನಂಬಿಸಿ 7.ಕೋಟಿ.ರೂ ವಂಚಿಸಿದ್ದಾರೆ.ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ತಲೆ ಮರೆಸಿಕೊಂಡಿದ ಚೈತ್ರಾ ಕುಂದಾಪುರ ಮತ್ತು ತಂಡದವರನ್ನು ಬಂಧಿಸುವಲ್ಲಿ ಬೆಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊದಲನೇ ಆರೋಪಿಗಳಾದ ಚೈತ್ರಾ ಕುಂದಾಪುರ,ಗಗನ್ ಕಡೂರು,ಶ್ರೀಕಾಂತ್ ನಾಯಕ್ ಪೆಲತ್ತೂರು,ರಮೇಶ್ ಧನರಾಜ್ ಎಂಬ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣದಲ್ಲಿ ಭಾಗಿಯಾಗಿರುವ ಹಾಲಶ್ರೀ ಸ್ವಾಮೀಜಿ,ನಾಯ್ಕ್ ಎಂಬಾತನಿಗೆ ಪೊಲೀಸರು ಬಲೆ ಬಿಸಿದ್ದಾರೆ.ಪ್ರಸಾದ್ ಬೈಂದೂರು ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಎಂಎಲ್‌ಎ ಟಿಕೆಟ್ ವಂಚನೆ ಪ್ರಕರಣದಲ್ಲಿ 8 ಜನ ಆರೋಪಿಗಳು ಭಾಗಿಯಾಗಿರುವ ವಿಷಯ ಬೆಳಕಿಗೆ ಬಂದಿದ್ದು ತನಿಖೆ ಚುರುಕು ಗೊಂಡಿದೆ,ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರ ಬೀಳಲಿದೆ.