ಡಿಸೆಂಬರ್ 09 ರಂದು ನವಚೇತನ ಸಮಾವೇಶ, ಕುಂದಾಪುರ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ಉಡುಪಿ ವತಿಯಿಂದ ನವಚೇತನ ಸಮಾವೇಶ ಹಾಗೂ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಡಿಸೆಂಬರ್.09 ರಂದು ಸೋಮವಾರ ಅಂಬೇಡ್ಕರ್ ಭವನ ಕುಂದಾಪುರದಲ್ಲಿ ನಡೆಯಲಿದೆ.
ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಸುಂದರ್ ತೆಕ್ಕಟ್ಟೆ ಅಧ್ಯಕ್ಷತೆ ವಹಿಸಲಿದ್ದು,ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ, ಡಿವೈಎಸ್ಪಿ ಬೆಳ್ಳಿಯಪ್ಪ,ಉದ್ಯಮಿ ಎಂ ದಿನೇಶ್ ಹೆಗ್ಡೆ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರ್, ಜಿಲ್ಲಾ ಸಂಘಟನಾ ಸಂಚಾಲಕ ಸುರೇಶ್ ಹಕ್ಲಾಡಿ,
ಜಿಲ್ಲಾ ಸಂಘಟನಾ ಸಂಚಾಲಕ ಮಂಜುನಾಥ ನಾಗೂರು, ಮಹಿಳಾ ಒಕ್ಕೂಟ ಗೀತಾ ಸುರೇಶ ಕುಮಾರ್,ನಯನಾ ಆದೀಶ್, ಬೈಂದೂರು ತಾಲೂಕು ಸಂಚಾಲಕ ಶಿವರಾಜ್ ಬೈಂದೂರು ಮತ್ತಿತರರು ಭಾಗವಹಿಸಲಿದ್ದಾರೆ.ಎಂದು ಜಿಲ್ಲಾ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.