ಹೊಸಾಡು:ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು
ಕುಂದಾಪುರ:ಹೊಸಾಡು ಗ್ರಾಮದ ಕಮ್ಮಾರಕೊಡ್ಲು ಕಾವೇರಿ ನಿಲಯದ ನಿವಾಸಿ ಪ್ರಕಾಶ್ ಶೆಟ್ಟಿಗಾರ್ (48) ಎನ್ನುವವರು ತೋಟದ ಬಾವಿಯ ಕಸ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಆಯ ತಪ್ಪಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಗಂಗೊಳ್ಳಿ ಠಾಣೆಯ ಪಿಎಸ್‌ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಮೃತರ ಸಹೋದರ ರಾಜೇಶ ಶೆಟ್ಟಿಗಾರ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕಟರಣ ದಾಖಲಾಗಿದೆ.ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು ಅವರ ತಂಡದ ಸದಸ್ಯರು ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದರು,ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಶವವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.