ನಾವುಂದ:ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಉದ್ಘಾಟನೆ
ಬೈಂದೂರು:ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ,ಉಡುಪಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ.ಬಾಲಕಿಯರ ವಾಲಿಬಾಲ್ ಪಂದ್ಯಾಟ ನಾವುಂದ ಕಾಲೇಜಿನಲ್ಲಿ ಶನಿವಾರ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭಹಾರೈಸಿದರು.ನಾವುಂದ ಪಂಚಾಯತಿ ಅಧ್ಯಕ್ಷ ನರಸಿಂಹ ದೇವಾಡಿಗ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾಲೇಜಿನ ಅಬಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರವೀಣ್ ಪೂಜಾರಿ,ಎಂಎ ಖಾದರ್,ನಿವೃತ್ತ ಶಿಕ್ಷಕ ಸೀತಾರಾಮಯ್ಯ,ಮೊಹಮ್ಮದ್ ಇಲಿಯಾಸ್,ತಾ.ಪಂ ಮಾಜಿ ಸದಸ್ಯ ಮಹೇಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಕಾಲೇಜಿನ ಪ್ರಿನ್ಸಿಪಾಲ್ ಅರುಣ್ ನಾಯ್ಕ್ ಸ್ವಾಗತಿಸಿದರು.ಗಣೇಶ ಎಂ ನಿರೂಪಿಸಿದರು.ಸಾವಿತ್ರಿ ವಂದಿಸಿದರು.ಉಡುಪಿ ಜಿಲ್ಲೆಯ ಏಳು ಬಾಲಕ ಮತ್ತು ಬಾಲಕಿಯರ ತಂಡ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು.