ಬೆಲೆ ಬಾಳುವ ರಕ್ತಚಂದನ ಮರದ ತುಂಡುಗಳು ಸಹಿತ,ಆರೋಪಿಗಳು ವಶಕ್ಕೆ
ಮಂಗಳೂರು:ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 125 ಕೆ.ಜಿ ರಕ್ತ ಚಂದನವನ್ನು ದಾಳಿ ಮಾಡಿ ವಶಕ್ಕೆ ಪಡೆದಿದ್ದ ಘಟನೆ ವೇಣೂರು ಕರಿಮಣೇಲು ಎಂಬಲ್ಲಿ ನಡೆದಿದೆ.
ಆರೋಪಿಗಳಾದ ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ.
ಆರೋಪಿಗಳು ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು ನೇತೃತ್ವದ ತಂಡ ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಮತ್ತು ಸಾಗಾಟಕ್ಕೆ ಬಳಸಿದ ವಾಹನ ವಶಕ್ಕೆಪಡೆದಿದ್ದಾರೆ.



























































































































































































































































































































































































































































































































































































































































































































































































































































































































































































































































































































































































































































































































































































































































































