ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ್ ಆಯ್ಕೆ
ಕುಂದಾಪುರ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ,ಕನಕ ಅಧ್ಯಯನ ಪೀಠ,ಚೇತನಾ ಫೌಂಡೇಶನ್ ಹುಬ್ಬಳ್ಳಿ ಅವರ ಸಂಯುಕ್ತ ಆಶ್ರಯದಲ್ಲಿ ಕೊಡಮಾಡುವ ಡಾ| ಎಸ್, ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಉದಯ ನಾಯ್ಕ್ ರವರು ಆಯ್ಕೆಯಾಗಿದ್ದಾರೆ.ಶೈಕ್ಷಣಿಕ,ಸಾಹಿತ್ಯ,ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಸಾಧನೆಯನ್ನು ಪರಿಗಣಿಸಿ ಉಪನ್ಯಾಸಕ ಉದಯ್ ನಾಯ್ಕ್ ಅವರಿಗೆ ಈ ಪ್ರಶಸ್ತಿ ದೊರೆತಿದೆ.ಉಪನ್ಯಾಸಕ ಉದಯ್ ನಾಯ್ಕ್ ಅವರಿಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದ ಶುಭಾಶಯವನ್ನು ಕೋರಿದ್ದಾರೆ.