ನಾಗೂರು:ತೋಟದ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ,ಅಧಿಕಾರಿಗಳಿಂದ ಶೋಧನಾ ಕಾರ್ಯ ಮುಂದುವರಿಕೆ

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು
ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಕಾಣಿಸಿಕೊಂಡಿದ್ದು ಕೂತುಹಲ ಮೂಡಿಸಿದೆ.
ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ.ನಾಗೂರುನಲ್ಲಿ
ಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಬಾವಿಯೊಳಗೆ ಇರುವ ಮೊಸಳೆಯನ್ನು ಹಿಡಿಯಲು
ಅರಣ್ಯ ಇಲಾಖೆ,ಪೋಲಿಸ್, ಇಲಾಖೆ ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅವರ ಸಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು ಮೊಸಳೆ ಹಿಡಿಯಲು ಸಾಧ್ಯವಾಗಲಿಲ್ಲ.
ಬಾವಿಯೊಳಗೆ ಬೋನ್ ಇಟ್ಟು ವಿಶೇಷ ಕಾರ್ಯಾಚರಣೆ ಮೂಲಕ ಮೊಸಳೆಯನ್ನು ಸೆರೆ ಹಿಡಿಯಲು ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ನಾಗೂರು ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಅವರ ಸಹಕಾರದೊಂದಿಗೆ ಬಾವಿಯ ಸುತ್ತಲೂ ಸಿ ಸಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಕಂಪ್ಯೂಟರ್ ಮೂಲಕ ಮೊಸಳೆಯ ಓಡಾಟವನ್ನು ಗಮನಿಸಲಾಗುತ್ತದೆ.ಮೊಸಳೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಯುತ್ತಿತ್ತು
ಭಾವಿಯ ದಂಡೆಯನ್ನು ನೆಲಸಮಾನಕ್ಕೆ ಮಾಡಲಾಗಿದ್ದು.ಬಾನಿಗೆ ಕೋಳಿಯ ಮಾಂಸವನ್ನು ಹಾಕಿ ಇಡಲಾಗಿದೆ.ಮೊಸಳೆಯನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ
ಈ ಸಂದರ್ಭದಲ್ಲಿ ಸಾವಿರಾರು ಮಂದಿ ಜನರು ಬರುವಿಕೆಯನ್ನು ನೋಡಲು ಬರುತ್ತಿದ್ದಾರೆ. ಪೋಲಿಸ್ ಇಲಾಖೆ ಬಿಗಿ ಬಂದ ಬಿಗಿ ನಿರ್ವಹಿಸ್ತಿದೆ.