ಬೈಂದೂರು ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಂಸದರು ಮನವಿ
ಕುಂದಾಪುರ:ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಮಾಡುವಂತೆ ಮನವಿಯನ್ನು ಸಲ್ಲಿಸಿದರು.
ಕೇಂದ್ರ ಸಚಿವರು ಸಕಾರಾತ್ಮಕವಾಗಿ ಮನವಿಗೆ ಸ್ಪಂದನೆ ಮಾಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.