ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ.ಉಮೇಶ ಪುತ್ರನ್ ಆಯ್ಕೆ
ಕುಂದಾಪುರ:ತಾಲೂಕಿನ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಪೂರ್ವಾಭಾವಿ ಸಭೆ ಹೊಸಾಡು ಶಾಲೆಯಲ್ಲಿ ಭಾನುವಾರ ನಡೆಯಿತು.ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ.ಉಮೇಶ್ ಪುತ್ರನ್ ಅರಾಟೆ ಅವರು ಸರ್ವಾನುಮತದಿಂದ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಹೊಸಾಡು ಶಾಲೆ ಮುಖ್ಯ ಶಿಕ್ಷಕ ರಾಜೇಶ್,ಶತಾಬ್ಧಿ ಯೋಜನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಪೂಜಾರಿ ಅರಾಟೆ,ಕೋಶಾಧಿಕಾರಿಯಾಗಿ ರಾಜೀವ ಶೆಟ್ಟಿ ಕಡ್ಲೇರ ಮನೆ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ಡಾ.ಕಿಶೋರ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಸದಾಶಿವ ಶೆಟ್ಟಿ,ರಾಜೀವ ಶೆಟ್ಟಿ,ಎಂ.ಎಂ ಸುವರ್ಣ,ವಕೀಲರಾದ ಮಂಜುನಾಥ ಅರಾಟೆ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಆಚಾರ್ಯ,ವಿದ್ಯಾಭಿಮಾನಿಗಳು,ಹಳೆ ವಿದ್ಯಾರ್ಥಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.ಡಾ.ಕಿಶೋರ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಶಿಕ್ಷಕ ರಾಜೇಶ್ ಸ್ವಾಗತಿಸಿದರು.ಎಸ್ಡಿಎಂಸಿ ಅಧ್ಯಕ್ಷೆ ರೇಖಾಗಣೇಶ್ ವಂದಿಸಿದರು.