ಹಕ್ಲಾಡಿ:ಸಂವಿಧಾನ ಜಾಥಾ ಕಾರ್ಯಕ್ರಮ
ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್‍ನಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಅಂಬೇಡ್ಕರ್ ಮತ್ತು ಗಾಂಧಿಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಚಂಡೆ ವಾದನ ಸಹಿತ ಪೂರ್ಣ ಕುಂಭದೊಂದಿಗೆ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿಕೊಳ್ಳಲಾಯಿತು.
ಹಂಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ದಲಿತ ಸಂಘಟನೆ ಮುಖಂಡ ಉದಯ ಕೊಳೂರು ಸಂವಿಧಾನ ಪ್ರತಿಜ್ಞಾವಿಧಿ ಬೋದಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಸಂವಿಧಾನ ಮಹತ್ವ ಕುರಿತು ಮಾಹಿತಿ ನೀಡಿದರು.ಪಂಚಾಯತಿ ಸದಸ್ಯರಾದ ಚೇತನ್ ಹೆಗ್ಡೆ,ಶಾರದ,ವೀಣಾರಾಣಿ,ರಾಧ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸತೀಶ್ ಮತ್ತು ಪಂಚಾಯತ್ ಸಿಬ್ಬಂದಿಗಳು,ಸಂಜೀವಿನಿ ಸದಸ್ಯರು,ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪಂಚಾಯತ್ ವತಿಯಿಂದ ಬಹುಮಾನ ವಿತರಿಸಲಾಯಿತು.