ಹಕ್ಲಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪ್ರೇಮ ದೇವಾಡಿಗ ಆಯ್ಕೆ
ಕುಂದಾಪುರ:ಹಕ್ಲಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯರಾದ ಪ್ರೇಮ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಹೊಳ್ಮಗೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಕ್ಲಾಡಿ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ 14 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ 02 ಸದಸ್ಯರು ಸೇರಿ ಒಟ್ಟು 16 ಸದಸ್ಯರಿದ್ದಾರೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡದಿರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡರು.