ಬೈಂದೂರು ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಖಚಿತ
ಕುಂದಾಪುರ:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಕಾಂಗ್ರಸ್ ಪಕ್ಷ ಸೇರ್ಪಡೆಗೊಳ್ಳುವುದ ಭಾಗಶಃ ಖಚಿತವಾಗಿದೆ.ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಬೆಂಗಳೂರಿನಲ್ಲಿ ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಮಾಜಿ ಶಾಸಕ ಬಿಜೆಪಿ ಪಕ್ಷವನ್ನು ತೊರೆದಿದ್ದರು.ಕಳೆದ ಒಂದು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿ.ಎಂ ಸುಕುಮಾರ್ ಶೆಟ್ಟಿ ಅವರು ಸೇರ್ಪಡೆ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.ಲೋಕಸಭಾ ಕ್ಷೇತ್ರದ ಚುನಾವಣೆ ಹೊತ್ತಿನಲ್ಲಿ ಬೈಂದೂರು ಕ್ಷೇತ್ರದ ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುವುದು ಖಚಿತವಾಗಿದೆ.ಇಂದು ನಾಳೆ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಕೈ ಹಿಡಿಯಲಿದ್ದಾರೆ.ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭೇಟಿ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ,ಆಯನೂರು ಮಂಜುನಾಥ,ಸುಧೀರ್ ಕುಮಾರ್ ಮುರೊಳ್ಳಿ ಉಪಸ್ಥಿತರಿದ್ದರು.