ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕರಾವಳಿ ಕರ್ನಾಟಕದಾದ್ಯಂತ ನವರಾತ್ರಿಯ ಉತ್ಸವವು ವಿಜ್ರಂಬಿಸುತ್ತಿದೆ ಮತ್ತು ಹುಲಿ ವೇಷ ಅಥವಾ ಹುಲಿ ನೃತ್ಯವು ಜನಮನ ಸೆಳೆಯುವ ಒಂದು ಸಾಂಸ್ಕೃತಿಕ ದೃಶ್ಯವಾಗಿದೆ. ಹುಲಿ ವೇಷ ಸಂಪ್ರದಾಯವು ಭಕ್ತಿಯಲ್ಲಿ ಆಳವಾಗಿ ಬೇರೂರಿದೆ.ಇದು ಪ್ರತಿಜ್ಞೆಯನ್ನು ಪೂರೈಸಲು ಅಥವಾ ದೈವಿಕ ರಕ್ಷಣೆಗಾಗಿ ದೇವಿಗೆ ಅರ್ಪಣೆಗಾಗಿ ಹುಟ್ಟಿಕೊಂಡಿದೆ ಎಂದು ನಂಬಲಾಗಿದೆ.ಇತ್ತೀಚಿನ ವರ್ಷಗಳಲ್ಲಿ ಈ ಪ್ರಾಚೀನ ಸಂಪ್ರದಾಯವು ತುಳುನಾಡು ಪ್ರದೇಶದಲ್ಲಿ ಸಾಂಸ್ಕೃತಿಕ ಹೆಮ್ಮೆಯ ಭವ್ಯ ಪ್ರದರ್ಶನವಾಗಿ ವಿಕಸನಗೊಂಡಿದೆ.
ಸಾಂಸ್ಕೃತಿಕ ಆಚರಣೆ,ಕಲೆ, ಸಂಸ್ಕಾರಕ್ಕೆ ಹೆಚ್ಚಿನ ಒತ್ತು ನೀಡುವ ಕುಂದಾಪುರದ ಸುಜ್ಞಾನ ಎಜುಕೇಶನ್ ಟ್ರಸ್ಟ್(ರಿ )ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಆಕರ್ಷಣೆಯಾಗಿ ಚೌಡೇಶ್ವರಿ ಹುಲಿ ವೇಷ ಕುಣಿತ ತಂಡ ಕುಂದಾಪುರ ಇವರಿಂದ ಸಾಂಸ್ಕೃತಿಕ ಹುಲಿ ವೇಷ ಕುಣಿತ ಪ್ರದರ್ಶನ ನಡೆಯಿತು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಹುಲಿವೇಷದೊಂದಿಗೆ ಹೆಜ್ಜೆ ಹಾಕಿದರು.ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ರಾಜ್ಯದ ವಿವಿಧ ಭಾಗದ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಆಚರಣೆಯ ಜ್ಞಾನವನ್ನು ಒದಗಿಸುವ ನಿಟ್ಟಿನಲ್ಲಿ ಬಹಳ ವೈಭವದಿಂದ ಹುಲಿ ವೇಷ ಕುಣಿತದ ಆಯೋಜನೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್.ಬಿ.ಶೆಟ್ಟಿ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಪ್ರದೀಪ್. ಕೆ ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿಗಳು,ಪೋಷಕರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.