ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಸಭೆ
ಕುಂದಾಪುರ:ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳ ಸಭೆ ಕೊಂಕಣ ಖಾರ್ವಿ ಸಭಾಭವನದಲ್ಲಿ ಗುರುವಾರ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬೈಂದೂರು ವೃತ್ತ ನಿರೀಕ್ಷ ಸವಿತ್ರಾ ತೆಜ್ ಮಾತನಾಡಿ,ಸಾರ್ವಜನಿಕವಾಗಿ ಆಚರಣೆಗೊಳ್ಳುವ ಗಣೇಶೋತ್ಸವ ಕಾರ್ಯಕ್ರಮದ ಬಗ್ಗೆ ಸರಕಾರದ ಮಾರ್ಗಸೂಚಿ ಮತ್ತು ಧ್ವನಿ ವರ್ಧಕ ಬಳಕೆ ಕುರಿತು ಮಾಹಿತಿ ನೀಡಿದರು.ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದರು.ಈ ಸಂದರ್ಭ ಗಂಗೊಳ್ಳಿ ಠಾಣೆ ಪಿಎಸ್‌ಐ ಹರೀಶ್ ಆರ್ ನಾಯ್ಕ್ ಮತ್ತು ತನಿಖೆ ಪಿಎಸ್‌ಐ ಬಸವರಾಜ್ ಉಪಸ್ಥಿತರಿದ್ದರು.ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.