ಮರಬಿದ್ದು ವಿದ್ಯುತ್ ಕಂಬಕ್ಕೆ ಹಾನಿ
ಕುಂದಾಪುರ:ಸತತವಾಗಿ ಸುರಿಯುತ್ತಿರುವ ಬಾರಿ ಗಾಳಿ ಮಳೆಗೆ ಗುಜ್ಜಾಡಿ ಗ್ರಾಮದ ನಾಯಕವಾಡಿಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿ ಆಗಿದೆ.ಆಸು ಪಾಸಿನ ಪ್ರದೇಶದ ಮನೆಗಳಿಗೆ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಡಿತಗೊಂಡಿತ್ತು.ಮೆಸ್ಕಾಂ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವುದರ ಮುಖೇನ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಸರಿಪಡಿಸಿದರು.