ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ಬೈಂದೂರು:ಪಡುಕೋಣೆ ನಿವಾಸಿ ಪ್ರಶಾಂತ್ ಸುನಂದಾ ದಂಪತಿಗಳ ಪುತ್ರಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಸಿಂಧು (16) ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಪಡುಕೋಣೆಯಲ್ಲಿ ಗುರುವಾರ ನಡೆದಿದೆ.
ಕುಂದಾಪುರ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು,ಸಮೀಪದ ಶಾಲೆಯೊಂದರಲ್ಲಿ ಸಿಂಧು 10ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.ಕಳದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ಸಿಂಧು ಮನೆಗೆ ತೆರಳಿದ್ದರು,ಬುಧವಾರ ಅವರ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಗುರುವಾರ ಶಾಲೆಗೆ ತೆರಳಬೇಕಿದ್ದ ಸಿಂಧು ಅವರು ಶಾಲೆಗೆ ತೆರಳದೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತದೇಹವನ್ನು ಮೊದಲಿಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕೊಂಡಯ್ಯಲಾಗಿತ್ತು,ಹೆಚ್ಚಿನ ಪರೀಕ್ಷೆಗಾಗಿ ಮೃತ ದೇಹವನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಹಾಗೂ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.











































































































































































































































































































































































































































































































































































































































































































































































































































































































































































































































































































































































































































































































































































































































































