ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ
ಬೈಂದೂರು:ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಅವರು ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ಪರಿಸ್ಥಿತಿಯನ್ನು ಅವಲೋಕಿಸಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ ಮಾತನಾಡಿ, ಮಳೆಗಾಲದಲ್ಲಿ ಸೌಪರ್ಣಿಕಾ ನದಿ ಉಕ್ಕಿ ಹರಿಯುವುದರಿಂದ ನದಿ ತೀರ ಪ್ರದೇಶದಲ್ಲಿ ಪ್ರತಿ ವರ್ಷ ನೆರೆ ಬಂದು ಸಾಕಷ್ಟು ಹಾನಿ ಸಂಭವಿಸುತ್ತಿದೆ.ನದಿ ದಂಡೆ ಏರಿಕೆ ಯಿಂದ ಹೆಚ್ಚಿನ ಅನಾಹುತ ತಪ್ಪಿಸಬಹುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಗ್ರಾಮಸ್ಥರು ಉಪಸ್ಥಿತರಿದ್ದರು.