ಅಪಾಯಕಾರಿ ಮರ,ವಿದ್ಯುತ್ ಕಂಬ ಸ್ಥಳಾಂತರಕ್ಕೆ ಆಗ್ರಹ
ಕುಂದಾಪುರ:ತಾಲೂಕಿನ ಆಲೂರು-ಮುಳ್ಳಿಕಟ್ಟೆ ಮುಖ್ಯ ರಸ್ತೆ ಅಂಚಿನಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸಹಿತ ಮರವನ್ನು ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಸ್ಥಳಾಂತರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸಂಪೂರ್ಣವಾಗಿ ಹದಗೆಟ್ಟು ಹೋಗಿರುವ ಆಲೂರು-ಮುಳ್ಳಿಕಟ್ಟೆ ಮುಖ್ಯ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಒಂದನೆ ಹಂತದ ಕಾಮಗಾರಿ ಮುಗಿದಿದೆ.ರಸ್ತೆ ಅಭಿವೃದ್ಧಿ ಕಾರ್ಯದ ಸಂದರ್ಭದಲ್ಲಿ ರಸ್ತೆ ಅಂಚಿನಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಮತ್ತು ಮರವವನ್ನು ತೆರವುಗೊಳಿಸದೆ ಗುತ್ತಿಗೆದಾರರು ಕಾಮಗಾರಿ ಕೆಲಸವನ್ನು ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.ರಸ್ತೆ ಅಂಚಿನಲ್ಲಿರುವ ಮರವನ್ನು ತೆರವು ಮಾಡದೆ ಬುಡದವರೆಗೆ ಡಾಮರು ಹಾಕಿ ಕೆಲಸವನ್ನು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.