ವಿದ್ಯಾರ್ಥಿಗಳಿಗೆ ಪುಸ್ತಕ,ಕಲಿಕಾ ಸಾಮಾಗ್ರಿ ವಿತರಣೆ
ಕುಂದಾಪುರ:ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಮತ್ತು ಲೇಖನ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಎಸ್‍ಡಿಎಂಸಿ ಅಧ್ಯಕ್ಷ ರತ್ನಾಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ,ಬ್ಯಾಗ್ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.ಗಂಗೊಳ್ಳಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ ಪೂಜಾರಿ,ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ,ಶಿಕ್ಷಕವೃಂದವರು ಉಪಸ್ಥಿತರಿದ್ದರು