ಜನತಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ
ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಯೋಗ ಶಿಕ್ಷಕಿ ಕು|ಅನ್ವಿತಾ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿದರು.ಜನತಾ ಪದವಿಪೂರ್ವ ಕಾಲೇಜಿನ ಅಂತರರಾಷ್ಟ್ರೀಯ ಮಟ್ಟದ ಯೋಗ ಪ್ರತಿಭೆಗಳಾದ ಕು|ಧನ್ವಿ ಮರವಂತೆ,ಕು|ತನ್ವಿತಾ,ಕು|ನಿರೀಕ್ಷಾ ಅವರಿಂದ ಹಾಗೂ ಶಾಲಾ ಆಯ್ದ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.
ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ,ಜನತಾ ಸಮೂಹ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.