ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೈಂದೂರು,ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಸಹಭಾಗಿತ್ವದಲ್ಲಿ ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾ ಕೂಟ
ಬೈಂದೂರು ವಲಯದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದಲ್ಲಿ ಅದ್ದೂರಿಯಾಗಿ ಶುಕ್ರವಾರ ನಡೆಯಿತು.
ಕ್ರೀಡಾ ಕೂಟದಲ್ಲಿ ಸುಮಾರು 23 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಾಲೆಯ ಆಡಳಿತ ಮಂಡಳಿ
ಕೈ ಗೊಂಡಿದ್ದ ಈ ಕ್ರೀಡಾಕೂಟವು ಅಚ್ಚುಕಟ್ಟಾದ ವ್ಯವಸ್ಥೆಯಿಂದ ಕ್ರೀಡಾಳು ಉತ್ಸಾಹ ಭರಿತರಾಗಿ ಕ್ರೀಡಾ ಚಟುವಟಿಕೆಯಲ್ಲಿ ಭಾಹವಹಿಸಿದ್ದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ಮಾತನಾಡಿ,ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಬಹಳಷ್ಟು ಶಿಸ್ತಿನಿಂದ ಪಾಲ್ಗೊಂಡಿದ್ದು,ತಮ್ಮ ಪ್ರತಿಭೆಯನ್ನು ತೋರ್ಪಡಿಸಿದ್ದಾರೆ ಎಂದು ಹೇಳಿ,ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಂಜುನಾಥ್ ಶೆಟ್ಟಿ, ವಿಶ್ವ ಕ್ರಿಕೆಟ್ ಉತ್ತಮ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚಣಿ, ಅಂತರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತ ಧನ್ವಿತ ವಾಸು ಮೊಗೇರ್ ಸನ್ಮಾನಿಸಿ ಗೌರವಿಸಲಾಯಿತು.
ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಅರುಣ್ ಕುಮಾರ್ ಮಾತನಾಡಿ,ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಲಾಖೆಯಿಂದ ಆಯೋಜಿಸಿದ ಕಂಬದಕೋಣೆ ಹೋಬಳಿ ಮಟ್ಟದ ಕಾರ್ಯಕ್ರಮವನ್ನು ಬಹಳಷ್ಟು ವ್ಯವಸ್ಥಿತವಾದ ರೀತಿಯಲ್ಲಿ ಆಯೋಜನೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಶಾಲೆಯ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಉಪ್ಪುಂದದ ಮುಖ್ಯೋಪಾಧ್ಯಾಯಿನಿ ಶೋಭಾ ಡಿ ಅಲ್ಮೇಡಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಕ್ರೀಡೆಯಲ್ಲಿ ಗೆಲ್ಲುವುದು ಮುಖ್ಯವಲ್ಲ ಭಾಗವಹಿಸಿಸುವುದು ಮುಖ್ಯ.ಈ ಒಂದು ಕ್ರೀಡಾಕೂಟ ಯಶಸ್ವಿಯಾಗಿ ನಡೆದಿದ್ದು, ಈ ಕ್ರೀಡಾಕೂಟ ಉತ್ತಮವಾಗಿ ನಡೆಯಲು ಸಹಕರಿಸಿದ ನಮ್ಮ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಶ್ರೀ ಯು.ಬಿ.ಶೆಟ್ಟಿ ಸರ್ ಮತ್ತು ಕಾರ್ಯದರ್ಶಿಯಾದ ಯಶಶ್ರೀ ಮೇಡಮ್ ರವರಿಗೆ, ಶಾಲೆಯ ಶಿಕ್ಷಕರಿಗೆ ಮತ್ತು ಇಲಾಖೆಗೆ ಅಭಿನಂದನೆಯನ್ನು ಸಲ್ಲಿಸಿದರು.
ಶಾಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ,ವಿವಿಧ ಶಾಲೆಗಳ ಶಿಕ್ಷಕರಾದ ಸತೀಶ ಬಾಡ,ವಿಶ್ವನಾಥ ಪೂಜಾರಿ,ಗುರುರಾಜ,ಪ್ರಭಾಕರ,ಜನಾರ್ಧನ,ಮಂಜುನಾಥ ಶೆಟ್ಟಿ,ಅಮಿತಾ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ಶಿಕ್ಷಕ ಗೋವಿಂದರಾಜು ಸ್ವಾಗತಿಸಿದರು.
ಶಿಕ್ಷಕಿಯಾದ ಹೇಮಾ , ಸಂಧ್ಯಾ ನಿರೂಪಿಸಿದರು.ಶಿಕ್ಷಕ ರಾಮದಾಸ ನಾಯ್ಕ ವಂದಿಸಿದರು.
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ…
ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್…
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ…
ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ…
ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು…