ಅರಾಟೆ:ಇನ್ನೋವಾ ಕಾರ್‍ಗೆ ಬಸ್ ಡಿಕ್ಕಿ:ಕಾರ್ ಚಾಲಕ ಸಾವು



ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಇನ್ನೋವಾ ಕಾರ್‍ಗೆ ಅದೆ ಮಾರ್ಗದಲ್ಲಿ ಗಂಗೊಳ್ಳಿ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಅರಾಟೆ ಸೇತುವೆ ಬಳಿ ಡಿಕ್ಕಿ ಹೊಡೆದ ಪರಿಣಾಮ ಇನ್ನೋವಾ ಕಾರ್ ಚಾಲಕ ಗಂಭೀರ ಸ್ವರೂಪದ ಗಾಯದೊಂದಿಗೆ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಇನ್ನೋವಾ ಕಾರ್‍ನಲ್ಲಿ ಚಾಲಕ ಸೇರಿ ಇಬ್ಬರು ಪುರುಷರು,ಇಬ್ಬರು ಮಹಿಳೆಯರು,ಓರ್ವ ಮಗು ಪ್ರಯಾಣವನ್ನು ಮಾಡುತ್ತಿದ್ದರು.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿ.ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.