ಕುಂದಾಪುರ:ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ.
ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಫಿಶಿಂಗ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ
ಬುಲ್‌ಟ್ರಾಲ್ ಲೈಟ್ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ.
ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ಬುಲ್ ಟ್ರಾಲ್ ಬೋಟ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಡದೋಣಿ ಮೀನುಗಾರರು ಒತ್ತಾಯಿಸಿದ್ದಾರೆ.
ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಬುಲ್
ಟ್ರಾಲ್ ಬೋಟ್ ನವರು ಸುಮಾರು 45 ಪೊಸಿಷನ್ 2 9 ಲಾಂಗ್‌ನಲ್ಲಿ ಬುಲ್ಟ್ರೋಲ್ ಮಾಡುತ್ತಿದ್ದು ದೃಶ್ಯಗಳು ಕಂಡು ಬಂದ್ದಿದ್ದು ನಾಡದೋಣಿ ಯುವರು ಇದನ್ನು ಪ್ರತಿಭಟಿಸಿದ್ದಾರೆ.ಅಧಿಕಾರಿಗಳ ಗಮನಕ್ಕೆ ತಂದರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವುದು ನಾಡ ದೋಣಿಯ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ ಹೀಗೆ ಮುಂದುವರೆದರೆ ನಾಡ ದೋಣಿ ಮೀನುಗಾರರ ಕುಟುಂಬ ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವದರಲ್ಲಿ ಸಂಶಯವಿಲ್ಲ ಇದೊಂದು ಅವೈಜ್ಞಾನಿಕ ಮೀನುಗಾರಿಕೆ
ಲೈಟ್ ಫಿಶಿಂಗ್,ಬುಲ್ ಟ್ರಾಲ್‌ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್ ಮಾಡುವಂತಿಲ್ಲ.ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ ಲೈಸೆನ್ಸ್ ರದ್ಧತಿ,ದಂಡ ವಿಧಿಸುವುದರ ಮುಖಾಂತರ ಕಠಿಣ ಕ್ರಮ ಸಂಬಂಧಪಟ್ಟ ಇಲಾಖೆ ಕೈಗೊಳ್ಳಬೇಕು.ಈ ರೀತಿ ಕಾನೂನುಬಾಹಿರ ಮೀನುಗಾರಿಕೆ ಚಟುವಟಿಕೆ ಮಾಡುವುದನ್ನು ಕಂಡು ಬಂದಲ್ಲಿ ಇದರಿಂದ ಬುಲ್ಟ್ರೋಲ್ ನವರಿಗೂ ಮತ್ತು ನಾಡ ದೋಣಿ ಮೀನುಗಾರರು ಸಂಘರ್ಷಕ್ಕೆ ಕಾರಣವಾಗುತ್ತದೆ ಮುಂದಿನ ದಿನಗಳಲ್ಲಿ ನಾಡ ದೋಣಿ ಮೀನುಗಾರಿಗೂ ಮತ್ತು ಬುಲ್ಟ್ರಾಲ್ ಬೋಟ್ ನವರಿಗೂ ಘರ್ಷಣೆ ಉಂಟಾಗುವ ಸಂಭವವಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಚಿವರು ಮತ್ತು ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಡದೋಣಿ ಮೀನುಗಾರರು ಅಗ್ರಹಿಸಿದ್ದಾರೆ ಮತ್ತುಮುಂದಿನ ದಿನಗಳಲ್ಲಿ ಮೀನುಗಾರರು ಸೇರಿ
ಹೋರಾಟ ಮಾಡುತ್ತೇವೆ. ಎಂದು ಮೂರು ಜಿಲ್ಲೆಯ ನಾಡ ದೋಣಿ ಮೀನುಗಾರರ ಮುಖಂಡರು ಎಚ್ಚರಿಕೆ ನೀಡಿರುತ್ತಾರೆ
ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ, ಮರವಂತೆ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿ, ವೆಂಕಟರಮಣ ಖಾರ್ವಿ, ಕೋಡೇರಿ ವಲಯ ಅಧ್ಯಕ್ಷ ರಾದ ಡಿ ಚಂದ್ರ ಖಾರ್ವಿ, ಮಾಜಿ ಅಧ್ಯಕ್ಷರಾದ ಮದನ್ ಕುಮಾರ್, ರಾಜ್ಯ ಒಕ್ಕೂಟ ದ ಕಾರ್ಯದರ್ಶಿ ಯಶ್ವಂತ್ ಖಾರ್ವಿ, ಮಹಾ ಈಶ್ವರ್ ಸೇವಾ ಸಮಿತಿಯ ಅಧ್ಯಕ್ಷರಾದ ರಾಮ ಖಾರ್ವಿ, ರಾಣೆಬಲೆ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಮತ್ತು ಎಲ್ಲಾ ವಲಯದ ದೋಣಿಯ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…