ಕುಂದಾಪುರ

ಬುಲ್ ಟ್ರಾಲ್ ಫಿಶಿಂಗ್ ಬೋಟ್ ಅಡ್ಡಗಟ್ಟಿದ ಮೀನುಗಾರರು

Share

ಕುಂದಾಪುರ:ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ.
ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಫಿಶಿಂಗ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ
ಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ.
ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ಬುಲ್ ಟ್ರಾಲ್ ಬೋಟ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಡದೋಣಿ ಮೀನುಗಾರರು ಒತ್ತಾಯಿಸಿದ್ದಾರೆ.
ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಬುಲ್
ಟ್ರಾಲ್ ಬೋಟ್ ನವರು ಸುಮಾರು 45 ಪೊಸಿಷನ್ 2 9 ಲಾಂಗ್‌ನಲ್ಲಿ ಬುಲ್ಟ್ರೋಲ್ ಮಾಡುತ್ತಿದ್ದು ದೃಶ್ಯಗಳು ಕಂಡು ಬಂದ್ದಿದ್ದು ನಾಡದೋಣಿ ಯುವರು ಇದನ್ನು ಪ್ರತಿಭಟಿಸಿದ್ದಾರೆ.ಅಧಿಕಾರಿಗಳ ಗಮನಕ್ಕೆ ತಂದರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವುದು ನಾಡ ದೋಣಿಯ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ ಹೀಗೆ ಮುಂದುವರೆದರೆ ನಾಡ ದೋಣಿ ಮೀನುಗಾರರ ಕುಟುಂಬ ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವದರಲ್ಲಿ ಸಂಶಯವಿಲ್ಲ ಇದೊಂದು ಅವೈಜ್ಞಾನಿಕ ಮೀನುಗಾರಿಕೆ
ಲೈಟ್‌ ಫಿಶಿಂಗ್‌,ಬುಲ್‌ ಟ್ರಾಲ್‌ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್‌ ಮಾಡುವಂತಿಲ್ಲ.ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ ಲೈಸೆನ್ಸ್‌ ರದ್ಧತಿ,ದಂಡ ವಿಧಿಸುವುದರ ಮುಖಾಂತರ ಕಠಿಣ ಕ್ರಮ ಸಂಬಂಧಪಟ್ಟ ಇಲಾಖೆ ಕೈಗೊಳ್ಳಬೇಕು.ಈ ರೀತಿ ಕಾನೂನುಬಾಹಿರ ಮೀನುಗಾರಿಕೆ ಚಟುವಟಿಕೆ ಮಾಡುವುದನ್ನು ಕಂಡು ಬಂದಲ್ಲಿ ಇದರಿಂದ ಬುಲ್ಟ್ರೋಲ್ ನವರಿಗೂ ಮತ್ತು ನಾಡ ದೋಣಿ ಮೀನುಗಾರರು ಸಂಘರ್ಷಕ್ಕೆ ಕಾರಣವಾಗುತ್ತದೆ ‌ಮುಂದಿನ ದಿನಗಳಲ್ಲಿ ನಾಡ ದೋಣಿ ಮೀನುಗಾರಿಗೂ ಮತ್ತು ಬುಲ್ಟ್ರಾಲ್ ಬೋಟ್ ನವರಿಗೂ ಘರ್ಷಣೆ ಉಂಟಾಗುವ ಸಂಭವವಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಚಿವರು ಮತ್ತು ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಡದೋಣಿ ಮೀನುಗಾರರು ಅಗ್ರಹಿಸಿದ್ದಾರೆ ಮತ್ತುಮುಂದಿನ ದಿನಗಳಲ್ಲಿ ಮೀನುಗಾರರು ಸೇರಿ
ಹೋರಾಟ ಮಾಡುತ್ತೇವೆ. ಎಂದು ಮೂರು ಜಿಲ್ಲೆಯ ನಾಡ ದೋಣಿ ಮೀನುಗಾರರ ಮುಖಂಡರು ಎಚ್ಚರಿಕೆ ನೀಡಿರುತ್ತಾರೆ
ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ, ಮರವಂತೆ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿ, ವೆಂಕಟರಮಣ ಖಾರ್ವಿ, ಕೋಡೇರಿ ವಲಯ ಅಧ್ಯಕ್ಷ ರಾದ ಡಿ ಚಂದ್ರ ಖಾರ್ವಿ, ಮಾಜಿ ಅಧ್ಯಕ್ಷರಾದ ಮದನ್ ಕುಮಾರ್, ರಾಜ್ಯ ಒಕ್ಕೂಟ ದ ಕಾರ್ಯದರ್ಶಿ ಯಶ್ವಂತ್ ಖಾರ್ವಿ, ಮಹಾ ಈಶ್ವರ್ ಸೇವಾ ಸಮಿತಿಯ ಅಧ್ಯಕ್ಷರಾದ ರಾಮ ಖಾರ್ವಿ, ರಾಣೆಬಲೆ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಮತ್ತು ಎಲ್ಲಾ ವಲಯದ ದೋಣಿಯ ಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago