ಕುಂದಾಪುರ: ಮಂಗಳೂರು-ಬೆಂಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೋಮವಾರ ನಡೆದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ ಎಂದು ವರದಿಯಾಗಿದೆ.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಘಟನೆಯಲ್ಲಿ ಬಸ್ಸಿನ ಚಾಲಕ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಟ್ರಾಫಿಕ್ ಜಾಮ್:
ಅಪಘಾತದ ರಭಸದಿಂದಾಗಿ ಎರಡೂ ವಾಹನಗಳು ಜಖಂಗೊಂಡಿದ್ದು ರಸ್ತೆಯಲ್ಲೇ ನಿಂತಿವೆ. ಕೆಎಸ್‌ಆರ್‌ಟಿಸಿ ಬಸ್ಸನ್ನು ಹೆದ್ದಾರಿಯಿಂದ ತೆರವುಗೊಳಿಸದೇ ಇರುವುದರಿಂದ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುಮಾರು 1 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಹೆದ್ದಾರಿಯ ಎರಡೂ ಬದಿಯಲ್ಲೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು ವಾಹನ ಚಾಲಕರು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…