ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸ್ಪರ್ಶ 2024 ಫ್ರೇಷಸ್ ಡೇ ಕಾರ್ಯಕ್ರಮ ನಡೆಯಿತು.
ಕಾಲೇಜಿಗೆ ಆರಂಭಿಕ ವರ್ಷದಲ್ಲಿ ದಾಖಲಾತಿ ಹೊಂದಿರುವ ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಸ್ಪರ್ಶ -2024 ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಪಾಲ್ಗೊಂಡು,ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ನಟಿ,ಗಾಯಕಿ ರೂಪದರ್ಶಿಯಾಗಿರುವ ಮಹಿಮಾ ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ,ವಿದ್ಯಾರ್ಥಿ ಜೀವನ ಎಂಬುದು ಅನೇಕ ಅವಕಾಶ ಗಳನ್ನು ಹೊಂದಿರುವ ಆಗರವಾಗಿದೆ.ಇಂತಹ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿ ಕೊಂಡು. ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ ಎಂದು ತಿಳಿಸಿದರು. ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸುಬ್ರಮಣ್ಯ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾಲೇಜಿನ ನಿರ್ದೇಶಿಕಿ ಮಮತಾ, ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ, ವೈಸ್ ಪ್ರಿನ್ಸಿಪಾಲ್ ಸುಜಾತ ಅವರು ವಿದ್ಯಾರ್ಥಿಗಳಿಗೆ ಹಿತವಚನ ಮಾತುಗಳನ್ನು ಆಡಿದರು.ಸಾಂಸ್ಕೃತಿಕ ಸಂಯೋಜಕಿ ರಾಝಿಕ, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಉಪನ್ಯಾಸಕಿ ಸ್ವಾತಿ ನಿರೂಪಿಸಿದರು ,ಉಪನ್ಯಾಸಕಿ ಮಧುಮಿತಾ ಸ್ವಾಗತಿಸಿದರು, ಉಪನ್ಯಾಸಕಿ ಪ್ರಿಯಾ ಅತಿಥಿಗಳನ್ನು ಪರಿಚಯಿಸಿದರು,ಉಪನ್ಯಾಸಕಿ ಅನಿತಾ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…