ಪ್ರಾದೇಶಿಕ ಸುದ್ದಿ

ಬ್ರಹ್ಮಾವರದ ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಶ 2024-ಫ್ರೆಷರ್ಸ್ ಡೇ ಕಾರ್ಯಕ್ರಮ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸ್ಪರ್ಶ 2024 ಫ್ರೇಷಸ್ ಡೇ ಕಾರ್ಯಕ್ರಮ ನಡೆಯಿತು.
ಕಾಲೇಜಿಗೆ ಆರಂಭಿಕ ವರ್ಷದಲ್ಲಿ ದಾಖಲಾತಿ ಹೊಂದಿರುವ ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಸ್ಪರ್ಶ -2024 ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಪಾಲ್ಗೊಂಡು,ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ನಟಿ,ಗಾಯಕಿ ರೂಪದರ್ಶಿಯಾಗಿರುವ ಮಹಿಮಾ ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ,ವಿದ್ಯಾರ್ಥಿ ಜೀವನ ಎಂಬುದು ಅನೇಕ ಅವಕಾಶ ಗಳನ್ನು ಹೊಂದಿರುವ ಆಗರವಾಗಿದೆ.ಇಂತಹ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿ ಕೊಂಡು. ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ‌ ಎಂದು ತಿಳಿಸಿದರು. ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸುಬ್ರಮಣ್ಯ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾಲೇಜಿನ ನಿರ್ದೇಶಿಕಿ ಮಮತಾ, ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ, ವೈಸ್ ಪ್ರಿನ್ಸಿಪಾಲ್ ಸುಜಾತ ಅವರು ವಿದ್ಯಾರ್ಥಿಗಳಿಗೆ ಹಿತವಚನ ಮಾತುಗಳನ್ನು ಆಡಿದರು.ಸಾಂಸ್ಕೃತಿಕ ಸಂಯೋಜಕಿ ರಾಝಿಕ, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ಉಪನ್ಯಾಸಕಿ ಸ್ವಾತಿ ನಿರೂಪಿಸಿದರು ,ಉಪನ್ಯಾಸಕಿ ಮಧುಮಿತಾ ಸ್ವಾಗತಿಸಿದರು, ಉಪನ್ಯಾಸಕಿ ಪ್ರಿಯಾ ಅತಿಥಿಗಳನ್ನು ಪರಿಚಯಿಸಿದರು,ಉಪನ್ಯಾಸಕಿ ಅನಿತಾ ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago