ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಸಮೀಪ ಬಡಾಕೇರಿ ಮುಖ್ಯರಸ್ತೆಯಲ್ಲಿ ಕುಂದಾಪುರ ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಶಾಲಾ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬಸ್ಸಿನ ಚಕ್ರದಡಿಗೆ ಸಿಲುಕಿ ಕೊಂಡಿದ್ದು ಸಂಪೂರ್ಣ ಹಾನಿಯಾಗಿದೆ.ಬೈಕ್ ಸವಾರ ನಾಗೇಶ್ ಮೊಗವೀರ (34) ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ಹಾರಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಮಧ್ಯಾಹ್ನದ ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಕರೆತರುವ ಸಮಯದಲ್ಲಿ ನಾವುಂದ ಸಮೀಪ ಬಡಾಕೆರೆಯಲ್ಲಿ ಬೈಕ್ ಡಿಕ್ಕಿ ಹೊಡೆದಿದೆ.ಶಾಲಾ ವಾಹನ ಚಾಲಕನ ಅಜಾಗರುಕತೆ ಯಿಂದ ಇವೊಂದು ಘಟನೆ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.ಬಸ್ಸಿನ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ಹಾನಿ ಗೊಂಡಿದೆ.
ಮಕ್ಕಳಿಗೆ ಯಾವುದೇ ತೊಂದರೆ ರೀತಿಯಲ್ಲಿ ತೊಂದರೆ ಉಂಟಾಗಿಲ್ಲ,ಗಾಯಗೊಂಡಿದ್ದ ಬೈಕ್ ಸವಾರರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವರದಿ:ಜಗದೀಶ ದೇವಾಡಿಗ
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…