ಕುಂದಾಪುರ

ಕಸ್ತೂರಿ ರಂಗನ್ ವರದಿ ಜಾರಿ ಗುಮ್ಮ:ಹಳ್ಳಿಹೊಳೆ ಗ್ರಾಮಸ್ಥರಿಂದ ಭಾರಿ ವಿರೋಧ

Share

ಕುಂದಾಪುರ:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಸುನಂದಾ ಗೇರು ಬೀಜ ಕಾರ್ಖಾನೆ ಸುಳುಗೋಡು ಚಕ್ರ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪ್ರತಿಭಟನೆಯನ್ನುದ್ದೇಶಿಸಿ ಮಾತಾಡಿದ ಹೋರಾಟಗಾರ ಬೆಳ್ತಂಗಡಿಯ ಫಾ| ಡಾ| ಸಲೀನ್ ಜೋಸೆಫ್‌ ,ಪರಿಸರ ಸಂರಕ್ಷಣೆ ಉದ್ದೇಶದಿಂದ ಸುಪ್ರೀಂ ನಿರ್ದೇಶನದಂತೆ ಕಸ್ತೂರಿ ರಂಗನ್ ವರದಿ ಜಾರಿ ಸೂಚನೆಗಳು ಬಂದಿವೆ.ಈ ವರದಿಯಲ್ಲಿ ಜನ ವಸತಿ ಪ್ರದೇಶಗಳನ್ನು ಸಹ ಪರಿಸರ ಸೂಕ್ಷ್ಮ ವಲಯ ಎಂದು ಸೇರಿಸಿರುವುದು ದುರಂತ. ಇದರ ವಿರುದ್ಧ ಇನ್ನು ಜನರೇ ಧ್ವನಿ ಎತ್ತಬೇಕಿದೆ.ಉಡುಪಿ ಜಿಲ್ಲೆಯ ಸುಮಾರು 35 ಗ್ರಾಮಗಳ ಗ್ರಾಮಸ್ಥರು ಸಹ ಒಗ್ಗೂಡಿ ಹೋರಾಡದಿದ್ದರೆ ಕಾಡಂಚಿನಲ್ಲಿ ವಾಸಿಸುತ್ತಿರುವವರ ಬದುಕು ಶೋಚನೀಯವಾಗಲಿದೆ ಎಂದು ಎಚ್ಚರಿಸಿದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ,ಜನರ ಉಳಿವಿಗಾಗಿ ಹೋರಾಡಲು ಸದಾ ಸಿದ್ಧ.ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೇಗೆ ಹೋರಾಡಬೇಕು ಎನ್ನುವ ಬಗ್ಗೆ ಆದಷ್ಟು ಬೇಗ ಸಂಘಟಿತರಾಗಬೇಕಿದೆ. ಅರಣ್ಯ,ಪರಿಸರ ಸಂರಕ್ಷಣೆಗೆ ನಮ್ಮ ಬೆಂಬಲವಿದೆ.ಹಾಗಂತ ಬದುಕು ಕಟ್ಟಿಕೊಂಡಿರುವವರಿಗೆ ತೊಂದರೆ ಕೊಡುವುದು ಸರಿಯಲ್ಲ.ಈ ನೆಲೆಯಲ್ಲಿ ಪಕ್ಷಾತೀತ ಬೆಂಬಲವಿದೆ. ಕೇರಳದಲ್ಲಿ ಮನುಷ್ಯರೇ(ಫಿಸಿಕಲ್) ಸರ್ವೇ ನಡೆಸಿದ್ದಾರೆ.ಆದರೆ ಇಲ್ಲಿ ಸ್ಯಾಟಲೈಟ್ ಸರ್ವೇಯಿಂದ ಜನ ವಸತಿ ಪ್ರದೇಶಗಳು ಸೇರಿಕೊಂಡಿವೆ.ಇಲ್ಲಿಯೂ ಫಿಸಿಕಲ್ ಸರ್ವೇ ಆಗಲಿ ಎಂದು ಒತ್ತಾಯಿಸಿದರು.
ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ,ಈ ವರದಿ ಜಾರಿಯಾದರೆ ಕಾಡಂಚಿನ ಗ್ರಾಮಗಳಲ್ಲಿ ನೆಲೆಸಿರುವ ಸಾವಿರಾರು ಕುಟುಂಬಗಳಿಗೆ ಎಲ್ಲದಕ್ಕೂ ಸಮಸ್ಯೆಯಾಗಲಿದೆ. ಜನರಿಗೆ ಮಾತ್ರವಲ್ಲ,ಕೆಲ ಗ್ರಾಮಗಳ ಸರಕಾರಿ ಕಟ್ಟಡಗಳು ಅದೇ ವಲಯದಲ್ಲಿವೆ.ನಮ್ಮ ಹಕ್ಕನ್ನು ಕಸಿಯಲು ನಾವು ಬಿಡಬಾರದು.ಈ ನೆಲೆಯಲ್ಲಿ ಒಗ್ಗೂಡಿ ಹೋರಾಡಬೇಕು. ರಾಜ್ಯದಿಂದ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆರಳಿ ಮನವಿ ಮಾಡುವ ಅಗತ್ಯವಿದೆ. ಜನರೆಲ್ಲ ಒಗ್ಗೂಡಿ ವಿಧಾನಸೌಧದ ಎದುರು ಧರಣಿ ಮಾಡಬೇಕಾಗಿದೆ ಎಂದರು.
ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಅಧ್ಯಕ್ಷತೆ ಕ್ಷತೆ ವಹಿಸಿದ್ದರು.
ಮುದೂರು ಹಿತರಕ್ಷಣಾ ಸಮಿತಿ ಅಧ್ಯಕ್ಷ ಲಕ್ಷ್ಮಲ ಶೆಟ್ಟಿ,ವಂಡ್ಸೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ. ಅತುಲ್ ಕುಮಾರ್ ಶೆಟ್ಟಿ, ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಸದಸ್ಯರಾದ ಪ್ರಭಾಕರ ನಾಯ್ಕ,ಗುಲಾಬಿ, ನೇತ್ರಾವತಿ,ಗಿರಿಜಾ,ದಿನೇಶ್ ನಾಯ್ಕ್ ಉಪಸ್ಥಿತರಿದ್ದರು.
ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ಕೃಷ್ಣ ಚಾತ್ರ ಸ್ವಾಗತಿಸಿದರು.ಜಡ್ಕಲ್ ಹಿತರಕ್ಷಣಾ ಸಮಿತಿ ಅಧ್ಯಕ್ಷ ದೇವದಾಸ್ ವಿ.ಜೆ. ಪ್ರಾಸ್ತಾವಿಕ ಮಾತನಾಡಿದರು. ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಸದಸ್ಯ ಪ್ರದೀಪ್ ಕೊಠಾರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago