ಕುಂದಾಪುರ

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನ

Share

ಕುಂದಾಪುರ:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರು ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಮೂರು ಬಾರಿ ಬೈಂದೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರು.ಕೆ.ಗೋಪಾಲ ಪೂಜಾರಿ ವಿರುದ್ಧ ಸತತವಾಗಿ ಎರಡು ಬಾರಿ ಸೋತಿದ್ದರು.ತಮ್ಮ ಮೂರನೇ ಪ್ರಯತ್ನದಲ್ಲಿ ಕ್ಷೇತ್ರದ ಜನರ ವಿಶ್ವಾಸ ಗಳಿಸಿ.ಆಗಿನ ಹಾಲಿ ಶಾಸಕರಾಗಿದ್ದ ಕೆ.ಗೋಪಾಲ ಪೂಜಾರಿ ಅವರ ವಿರುದ್ಧ ಗೆದ್ದು ಬಿಗಿದಿದ್ದರು.ಜನರಪರ ಕೆಲಸ ಕಾರ್ಯಗಳ ಮೂಲಕ ಮನೆ ಮಾತಾಗಿದ್ದ ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರ ನೆನಪನ್ನು ಬೈಂದೂರು ಕ್ಷೇತ್ರದ ಜನರು ಇಂದಿಗೂ ಸ್ಮರಿಸುತ್ತಿರುವುದು
ಅವರ ಅಭಿವೃದ್ಧಿ ಕಾರ್ಯಗಳಿಗೆ ಹಿಡಿದ ಕೈಗನ್ನಡಿ ಆಗಿದೆ.
ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.ಮ್ರತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಪತ್ನಿ ಕೆಲವು ವರ್ಷಗಳ ಹಿಂದೆ ಅಗಲಿದ್ದರು.ಅನೇಕ ದಿನಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago