ಈಜಲು ಹೋದ ಇಬ್ಬರು ನೀರುಪಾಲು
ಮಂಗಳೂರು:ಮರವೂರು ಪಲ್ಗುಣಿ ನದಿಯಲ್ಲಿ ಈಜಲು ಹೋದ ಮಂಗಳೂರಿನ ಇಬ್ಬರು ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂದು ಗುರುತಿಸಲಾಗಿದೆ.
ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆ ಬಳಿ ಪಲ್ಗುಣಿ ನದಿಯಲ್ಲಿ ಈಜಲು ನಾಲ್ವರು ಯುವಕರ ತಂಡ ಹೋಗಿದ್ದು ಕೋಡಿಕಲ್ ನಿವಾಸಿಗಳಾದ ಅರುಣ್ ಹಾಗೂ ದೀಕ್ಷಿತ್ ಅಪಾಯವಿಲ್ಲದೆ ಬಚಾವಾಗಿದ್ದಾರೆ.
ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿದ್ದು ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.