ಬೆಂಗಳೂರು:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ ಜಿಲ್ಲೆಯ,ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಪಡೆದು ಕೊಂಡಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯದ ಕಾರ್ಯಕ್ರಮದಲ್ಲಿ ಇವೊಂದು ಪ್ರಶಸ್ತಿಯನ್ನು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್,ಪ್ರಧಾನಿ ನರೇಂದ್ರ ಮೋದಿ,ಪ್ರವಾಸೋದ್ಯಮ ಇಲಾಖೆಯ ಸಚಿವರು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಕುತ್ಲೂರು ಗ್ರಾಮಸ್ಥರಾದ ಹರೀಶ್ ಡಿ. ಸಾಲ್ಯಾನ್ ಮತ್ತು ಶಿವರಾಜ್ ಅಂಚನ್ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.
ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋದ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋಧ್ಯಮ ಮಂತ್ರಾಲಯ ಬೆಸ್ಟ್ ಟೂರಿಸಂ ವಿಲೇಜ್ ಕಾಂಫಿಟೀಶನ್-2024 ನ್ನು ಏರ್ಪಡಿಸಿತ್ತು.ಈ ಸ್ಪರ್ಧೆಗೆ ನಾರಾವಿ ಗ್ರಾಪಂ ವ್ಯಾಪ್ತಿಯ ಕುತ್ಲೂರು ನಿವಾಸಿಗಳಾದ ಹರೀಶ್ ಡಿ. ಸಾಲ್ಯಾನ್, ಶಿವರಾಜ್ ಮತ್ತು ಸಂದೀಪ್ ಪೂಜಾರಿ ನಾರಾವಿ ಇವರು ಕುತ್ಲೂರು ಗ್ರಾಮದ ಪ್ರವಾಸಿ ತಾಣಗಳು, ಪರಿಸರ ಹಾಗೂ ಪ್ರಕೃತಿಯ ಸೊಬಗಿನ ಬಗ್ಗೆ ಒಂದು ಡ್ಯಾಕ್ಯುಮೆಂಟರಿ ಮಾಡಿ ಅದನ್ನು ಸ್ಪರ್ಧಾ ನಿಯಮದಂತೆ ಆನ್ ಲೈನ್‌ನಲ್ಲಿ ಅಪ್ ಲೋಡ್ ಮಾಡಿದ್ದರು. ಇದರ ಬಗ್ಗೆ ಹಲವು ಸುತ್ತುಗಳಲ್ಲಿ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸೋದ್ಯಮ ಮಂತ್ರಾಲಯ ಪಡೆದುಕೊಂಡಿತ್ತು. ದೇಶದಾದ್ಯಂತ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮ ಆಯ್ಕೆಯಾಗಿದೆ. ಇದರಿಂದಾಗಿ ಭವಿಷ್ಯದಲ್ಲಿ ಕುತ್ಲೂರು ಗ್ರಾಮಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ಸಾಧ್ಯತೆಯಿದೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…