ಕುಂದಾಪುರ:ಸನ್ಮಾನ ಕಾರ್ಯಕ್ರಮ,ಸಹಾಯಧನ ವಿತರಣೆ

ಕುಂದಾಪುರ :ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಕುಂದಾಪುರ, ಬೈತುಲ್ ಮಾಲ್ ಹಂಗಾರಕಟ್ಟೆ,ನಮ್ಮ ನಾಡ ಒಕ್ಕೂಟ (ರಿ.) ಉಡುಪಿ ಜಿಲ್ಲಾ ಸಮಿತಿ, ತವಕ್ಕಲ್ ಯಂಗ್ ಮೆನ್ಸ್ ಅಸೋಸಿಯೇಶನ್ ಕಟಪಾಡಿ, ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ ರಿ ಬೆಳ್ವೆ ಇವರ ಆಶ್ರಯದಲ್ಲಿ ಸಹಾಯಧನ ಹಸ್ತಾಂತರ ಹಾಗೂ ಸನ್ಮಾನ ಕಾರ್ಯಕ್ರಮ ಭಾನುವಾರ ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಸಭಾಂಗಣದಲ್ಲಿ ನಡೆಯಿತು.
ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಅಧ್ಯಕ್ಷ ಅಬ್ದುಲ್ ಮುನಾಫ್ ಹಂಗಾರಕಟ್ಟೆ ಸಹಾಯಧನ ಹಸ್ತಾಂತರ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಫಾರ್ಮ್ ಡಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುವ ಕುಂದಾಪುರ ಕಟ್ಟೇರಿ ನಿವಾಸಿ ಅಜ್ಞಾಲುನ್ನಿಸಾರ ಅವರಿಗೆ ಸಹಾಯಧನ ಹಸ್ತಾಂತರಿಸಿದರು. ಇತ್ತೀಚೆಗಷ್ಟೇ ಸ್ವಾಮಿ ವಿವೇಕಾನಂದ ಪ್ರಶಸ್ತಿ ಪಡೆದ ಎಮ್. ಇಸ್ಟಾಲ್ ಮನ್ನಾ ಉಡುಪಿ ಇವರಿಗೆ ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಸನ್ಮಾನಿಸಿ ಗೌರವಿಸಲಾಯಿತು.
ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇದರ ಪ್ರಧಾನ ಕಾರ್ಯದರ್ಶಿ ಹುಸೈನ್ ಹೈಕಾಡಿ ಮಾತನಾಡಿ, ನಮ್ಮ ಸಂಸ್ಥೆ ಕಳೆದ ಮೂರು ವರ್ಷಗಳಿಂದ ಶಿಕ್ಷಣ, ಆರೋಗ್ಯ, ಉದ್ಯೋಗದ ಬಗ್ಗೆ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಯಾರೆಲ್ಲ ಯುವಕರು ಉದ್ಯೋಗ ಇಲ್ಲದವರಿಗೆ ಉದ್ಯೋಗ ಕೊಡಿಸುವಂತ ಕಾರ್ಯ ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಮಾಡುತ್ತಿದ್ದೇವೆ. ನಮ್ಮ ಸಂಸ್ಥೆ ಉದ್ಘಾಟನೆ ಆದ ಬಳಿಕ ಸುಮಾರು 700ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಿದ್ದೇವೆ. ಸರ್ಕಾರ, ನಮ್ಮ ಸಂಸ್ಥೆ, ದಾನಿಗಳ ಸಹಕಾರದೊಂದಿಗೆ ವಿದ್ಯಾಭ್ಯಾಸಕ್ಕೆ, ಬಡವರಿಗೆ ಸಹಾಯ ನೀಡುತ್ತಿದ್ದೇವೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಕಾರ್ಡ್ ಮಾಡಿಸುವಲ್ಲಿ ನಮ್ಮ ಸಂಸ್ಥೆ ಕಾರ್ಯ ನಡೆಸುತ್ತಿದೆ. ನಮ್ಮ ಉದ್ದೇಶ ಯಾರೆಲ್ಲ ಯುವಕರು ಉದ್ಯೋಗವಿಲ್ಲದೇ ಮನೆಯಲ್ಲಿ ಇದ್ದವರಿಗೆ ನಾವು ಉದ್ಯೋಗ ಕೊಡಿಸುವಲ್ಲಿ ನಮ್ಮ ಸಂಸ್ಥೆ ಮಾಡುತ್ತಿದೆ ಎಂದರು.
ಕೋಡಿ – ಕುಂದಾಪುರ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಅವರು ಮಾತನಾಡಿ, ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಕುಂದಾಪುರ ಇವತ್ತಿನ ದಿನಗಳಲ್ಲಿ ಅಥವಾ ನಮ್ಮ ಸಮಾಜದಲ್ಲಿ ವಿದ್ಯಾರ್ಥಿಗಳು ಯಾವ ರೀತಿಯ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ, ಅದಕ್ಕೆ ಯಾವ ರೀತಿಯ ಸಹಾಯವನ್ನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ಮಕ್ಕಳಿಗೆ ಮೋಟಿವೇಶನ್ ಮಾಡುತ್ತಿದ್ದಾರೆ. ಅವರಿಗೆ ಆತ್ಮವಿಶ್ವಾಸ ಜಾಸ್ತಿ ಆಗುವ ಹಾಗೇ ಪ್ರಯತ್ನಿಸುತ್ತಿದ್ದಾರೆ. ಮುಂದಿನ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ಸಹಾಯಧನವನ್ನು ಮಾಡುತ್ತಿದ್ದಾರೆ.ಅವರ ಪ್ರತಿಭೆಯನ್ನು ಗುರುತಿಸುವ ಕಾರ್ಯ ಕೂಡ ಮಾಡುತ್ತಿರುವುದು ಬಹಳ ಹೆಮ್ಮಯ ವಿಷಯವಾಗಿದೆ. ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಕುಂದಾಪುರ ಇನ್ನಷ್ಟ್ನು ಉತ್ತಮ ಕಾರ್ಯಗಳನ್ನು ಮಾಡಲಿ ಎಂದು ಆಶಿಸುತ್ತೇನೆ.
ಮನ್ಸೂರು ಇಬ್ರಾಹಿಂ ಅವರು ಮಾತನಾಡಿ,ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇವರು ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಕರ್ಯಗಳನ್ನು ಮಾಹಿತಿ ನೀಡಿ, ಅದರಿಂದ ಸಹಾಯವನ್ನು ನೀಡುತ್ತಿದ್ದಾರೆ. ನಾವು ಶಿಕ್ಷಣ, ಆರೋಗ್ಯದ ಬಗ್ಗೆ ಹೆಚ್ಚಾಗಿ ಒತ್ತು ನೀಡುತ್ತಿದ್ದೇವೆ. ನಾವು ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರ್ಕಾರದ ಸೌಲಭ್ಯಗಳನ್ನು ಮಾಡಿಕೊಡುತ್ತಿದ್ದೇವೆ. ಸಾಕಷ್ಟು ಕುಟುಂಬಗಳಿಗೆ ನಾವು ಸಹಾಯಧನ ನೀಡಿದ್ದೇವೆ, ಮುಂದೆ ಕೂಡ ನೀಡುತ್ತೇವೆ ಎಂದರು.
ಕೋಡಿ ಬ್ಯಾರೀಸ್ ಕಾಲೇಜಿನ ಬಿ.ಸಿ.ಎ. ವಿಭಾಗದಲ್ಲಿ 100/100 ಅಂಕ ಪಡೆದ ವಿದ್ಯಾರ್ಥಿನಿ ಸಫ್ನಾಝ್, ಬಿ.ಸಿ.ಎ 5 ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ಆಯಿಷಾ ಸಿದ್ದಿಕ್ ಇವರಿಗೆ ಸನ್ಮಾನ ಕಾರ್ಯಕ್ರಮ.
ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಕೋಶಾಧಿಕಾರಿ ಪೀರು ಸಾಹೇಬ್, ಹಂಗಾರಕಟ್ಟೆ ಬೈತುಲ್ ಮಾಲ್ ಖಜಾಂಚಿ ಜವಾನ್ ಅಕ್ಬರ್, ಕಟಪಾಡಿ ತವಕ್ಕಲ್ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಯು.ಎ. ರಶೀದ್, ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ ರಿ ಬೆಳ್ವೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ರಫೀಕ್ ಅಜೆಕಾರ್, ನಮ್ಮ ನಾಡ ಒಕ್ಕೂಟ ಉಡುಪಿ ಪ್ರಧಾನ ಕಾರ್ಯದರ್ಶಿ ಜಹೀರ್ ನಾಕುದ್, ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ ರಿ ಬೆಳ್ವೆ ಟ್ರಸ್ಟಿ ಮೊಹಮ್ಮದ್ ರೆಯನ್ ಬೆಳ್ವೆ ಎನ್ ಎನ್ ಒ ಕಮ್ಯೂನಿಟಿ ಸೆಂಟರ್ ಕುಂದಾಪುರ ಇದರ ಉಪಾಧ್ಯಕಾರಾದ ಜಮಾಲ್ ಗುಕ್ವಾಡಿ ಮೊಹಮ್ಮದ್ ಗುಲ್ವಾಡಿ, ಶಾಕಿರ್ ಹಾವಂಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕುಂದಾಪುರ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಹುಸೈನ್ ಹೈಕಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನಮ್ಮ ನಾಡ ಒಕ್ಕೂಟ ಎನ್.ಎನ್.ಒ ಕಮ್ಯೂನಿಟಿ ಸೆಂಟರ್ ಸದಸ್ಯ ಪಳ್ಳಿ ಉಸ್ಮಾನ್ ಗುಲ್ವಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.