ಕುಂದಾಪುರ:ಬೈಂದೂರ ತಾಲೂಕಿನ ಕೆರ್ಗಾಲ್ ನಾಯ್ಕನಕಟ್ಟೆ ಬನಗಲ್ ಹಾಡಿ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ವಿಜಯದಶಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.
ವೇದ ಮೂರ್ತಿ ಕೊರ್ಗಿ ನಾಗೇಶ್ವರ ಮಂಜರು ಮತ್ತು ರಾಘವೇಂದ್ರ ಕಾರಂತರ ಅವರ ಆಚಾರ್ಯತ್ವದಲ್ಲಿ
ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿ ಸನ್ನಿಧಾನದಲ್ಲಿ ಚಂಡಿಕಾ ಹೋಮ,ದುರ್ಗಾಹೋಮ,ಮಹಾಮಂಗಳಾರತಿ,ಹಣ್ಣುಕಾಯಿ ಸೇವೆ,ಅನ್ನದಾನ ಸೇವೆ ಜರುಗಿತು.ಭಕ್ತಾದಿಗಳು,ಗ್ರಾಮಸ್ಥರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವಿಯ ಪ್ರಾಸದವನ್ನು ಸ್ವೀಕರಿಸಿದರು.
ಮಕ್ಕಳು,ಪುರುಷರು ಮತ್ತು ಮಹಿಳೆಯರಿಗಾಗಿ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಜನಾ ಕಾರ್ಯಕ್ರಮ ಜರುಗಿತು.
ದೇವಸ್ಥಾನದ ಅಧ್ಯಕ್ಷರಾದ ಉದ್ಯಮಿ ಸತೀಶ ಕೊಠಾರಿ ಮಾತನಾಡಿ,ದೇವಿಯ ಪ್ರತಿಷ್ಠಾಪನೆ ಮಾಡಿದ ದಿನಗಳಿಂದ ಗ್ರಾಮದಲ್ಲಿ ದೇವಿಯ ಚೈತನ್ಯ ಕಂಡು ಬಂದಿದ್ದು ಗ್ರಾಮಸ್ಥರಿಗೆ ದೇವಿಯ ಶ್ರೀರಕ್ಷೆ ದೊರಕಿದೆ. ಬಹಳಷ್ಟು ಕಾರಣಿಕ ಶಕ್ತಿಯನ್ನು ಹೊಂದಿರುವ ವನದುರ್ಗಾ ದೇವಿ ನಮ್ಮ ಗ್ರಾಮದಲ್ಲಿ ನೆಲೆ ನಿಂತಿರುವುದೆ ನಮ್ಮೆಲ್ಲರ ಸೌಭಾಗ್ಯ ಎಂದು ಹೇಳಿದರು.
ಅರ್ಚಕರಾದ ರಾಘವೇಂದ್ರ ಕಾರಂತ ಮಾತನಾಡಿ,ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿದೆ.ತಾಯಿ ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರು,ಸರ್ವ ಸದಸ್ಯರು,ಮಹಿಳಾ ಸೇವಾ ಸಮಿತಿ ಅಧ್ಯಕ್ಷರು,ಸದಸ್ಯರು,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ದೇವಸ್ಥಾನದ ಆಡಳಿತ ಮೊಕ್ತೇಸರರು,ಗೌರವ ಸಲಹೆಗಾರರು ಮತ್ತು ಎಲ್ಲಾ ಸದಸ್ಯರು,ಗ್ರಾಮಸ್ಥರು,ಭಕ್ತಾಧಿಗಳು ಉಪಸ್ಥಿತರಿದ್ದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…