ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ನಡೆದಿದೆ.
ಬಸ್‌ನ ಡ್ರೈವರ್ ಬಸ್‌ನ ಚಕ್ರದಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತಪಟ್ಟವರನ್ನು ಮೈಸೂರು ಮೂಲದ ಭರತ್(28) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ,ಬಳಿಕ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಸ್ ನಲ್ಲಿ ಚಾಲಕ ಹಾಗೂ ಸಹ ಚಾಲಕರಿಬ್ಬರೂ ಮಾತ್ರ ಪ್ರಯಾಣಿಸುತ್ತಿದ್ದು ಸಹ ಚಾಲಕ ಅವಿನಾಶ್ ಎಂಬುವವರು ಅಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಲಿಲ್ಲ.
ಮೃತ ದೇಹವನ್ನು ಪುತ್ತೂರಿನ ಸರಕಾರಿ ಶವಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.