ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ.ಅಪಘಾತದ ತೀವೃತೆ ಗೂಳಿ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಉಡುಪಿ ಯಿಂದ ಮುರುಡೇಶ್ವರಕ್ಕೆ ತೆರಳಿ ಬಳಿಕ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದರ್ಶನ ಮಾಡಿಕೊಂಡು ಮಾರ್ಗ ಮಧ್ಯದಲ್ಲಿ ಮರವಂತೆ ಬೀಚ್‍ಗೆ ಭೇಟಿ ಮರಳಿ ಉಡುಪಿಗೆ ಸಾಗುತ್ತಿದ್ದ ಸಮಯದಲ್ಲಿ ಮೊವಾಡಿ ಕ್ರಾಸ್‍ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಡಿವೈಡರ್ ಮಧ್ಯೆ ಬೆಳೆದಿದ್ದ ಹಸಿ ಹುಲ್ಲು ತಿನ್ನುತ್ತಿದ್ದ ಗೂಳಿ ಏಕಾಎಕಿ ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದು ಗುದ್ದಿದೆ.ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗೂಳಿ ಸಾವನ್ನಪ್ಪಿದೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಸ್ಥಳ ಮಹಜರು ನಡೆಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…