ಬ್ರಹ್ಮಾವರ:ಕ್ರೆಟ್ ಟೆಕ್ ಫೆಸ್ಟ್ ಎಂಬುದು ವಿದ್ಯಾರ್ಥಿಗಳಿಗೆ ಚಟುವಟಿಕೆ ಮತ್ತು ಮನೋರಂಜನಾ ಕಾರ್ಯಕ್ರಮ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೊರ ತರುವ ಅವಕಾಶ ಒದಗಿಸುತ್ತದೆ.
ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಫುಡ್ ಟೆಕ್ನಾಲಜಿ ವಿಭಾಗದ ವತಿಯಿಂದ ಕ್ರೆಟ್ ಟೆಕ್ ಆವೃತ್ತಿ 3.0 ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅಂತರ್ ಪದವಿಪೂರ್ವ ಕಾಲೇಜು ಮಟ್ಟದ ಹಾಗೂ ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ವೈವಿಧ್ಯಮಯ ಆಹಾರ ವಿಭಾಗಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಣೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಪವಿತ್ರ ಎಂ ಮುಖ್ಯಸ್ಥರು ಮತ್ತು ಪಿಜಿ ಕಾರ್ಡಿನೇಟರ್ ಯೆನಪೋಯ ಸಂಸ್ಥೆ,ಹಾಗೂ ಶ್ರೀಮತಿ ಶಿಖಾ ಎಂ ಎಸ್, ಫುಡ್ ಕ್ವಾಲಿಟಿ ಕಂಟ್ರೋಲಿಸ್ಟ್ ಎಸಿಇ ಮಾರ್ಡನ್ ಕಿಚೆನ್,ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಆಹಾರ ತಂತ್ರಜ್ಞಾನ ವಿಭಾಗ ದಲ್ಲಿರುವ ಅವಕಾಶಗಳು ಮತ್ತು ವಿಭಾಗದ ಪ್ರಾಮುಖ್ಯತೆಯ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಅನ್ಸೀಟಾ ವಿಭಾಗದ ನಾಯಕನಾದ ಕಾರ್ತಿಕ್ ದೇವಾಡಿಗ ಉಪನಾಯಕ ಸೌರವ್ ಶೆಟ್ಟಿ , ಹಾಗೂ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಆ್ಯನಂ ಸ್ವಾಗತಿಸಿ, ವಿದ್ಯಾರ್ಥಿನಿ ರೇಖಾಶ್ರೀ ವಂದಿಸಿ, ವಿದ್ಯಾರ್ಥಿನಿ ಪ್ರಿಯದರ್ಶಿನಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…