ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಉಪಸ್ಥಿತರಿದ್ದರು.ವೈಸ್ ಪ್ರಿನ್ಸಿಪಾಲ್ ಸುಜಾತ ಹಾಗೂ ಉಪನ್ಯಾಸಕರು,ಉಪನ್ಯಾಸಕೇತರರು ಉಪಸ್ಥಿತರಿದ್ದರು.ಕನ್ನಡ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ಅನುಪಮ ಪಿ ಭಟ್ ನಿರೂಪಿಸಿದರು.




















































































































































































































































































































































































































































































































































































































































































































































































































































































































































































































































































































































































































































































































































































































































































